

ಅಮೃತಸರ: ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭರ್ಜರಿ ಬೇಟೆಯಾಡಿರುವ ಪಂಜಾಬ್ ಪೊಲೀಸರೂ ಫಿರೋಜ್ಪುರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 77 ಕೆಜಿ ಹೆರಾಯಿನ್, ಪಿಸ್ತೂಲ್ಗಳನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಿಂದ ಒಟ್ಟು 41 ಹಾಗು 31 ಕೆಜಿ ಹೆರಾಯಿನ್ ಹಾಗೂ ಬಂಧಿತ ಆರೋಪಿಗಳಿಂದ ಮೂರು ಪಿಸ್ತೂಲ್ಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳೂ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಂಜಾಬ್ ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಗೌರವ್ ಯಾದವ್ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಮಾದಕವಸ್ತು ಕಳ್ಳಸಾಗಾಣೆಯನ್ನೂ ಪತ್ತೆ ಹಚ್ಚಲೂ ಎರಡು ಪ್ರತ್ಯೇಕ ತಂಡಗಳನ್ನೂ ರಚಿಸಲಾಗಿತ್ತು. ಬಂಧಿತ ಆರೋಪಿಗಳೂ ದೇಶದ ಗಡಿಯಾಚೆ ಹಾಗೂ ಅಂತಾರಾಜ್ಯ ಮಾದಕವಸ್ತು ಕಳ್ಳಸಾಗಾಣೆಯಲ್ಲಿ ತೊಡಗಿದ್ದರೂ.
ಬಂಧಿತರಿಂದ ವಶಪಡಿಸಿಕೊಳ್ಳಲಾಗಿರುವ 77 ಕೆಜಿ ಹೆರಾಯಿನ್ ಮೌಲ್ಯವೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 400 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳೂ ಫಿರೋಜ್ಪುರದ ಗಗ್ಗಾ ಗಿಲ್, ವೀರ್ ಸಿಂಗ್, ಜಸ್ಬಿಂದರ್ ಸಿಂಗ್ ಹಾಗೂ ಜಗದೀಪ್ ಸಿಂಗ್ ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್, ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಡ್ರಗ್ಸ್ ಪ್ರಕರಣ ಸಂಬಂಧ ಪಾಕಿಸ್ತಾನದ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಎರಡು ತಂಡಗಳು ಈ ವಿಚಾರವಾಗಿ ತನಿಖೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆ ಎಂದು ಪಂಜಾಬ್ ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಗೌರವ್ ಯಾದವ್ ಮಾಹಿತಿ ನೀಡಿದ್ದಾರೆ.