7ಕ್ಕೆ ಶೀಗವಾಳು ಗ್ರಾಪಂ ಚುನಾವಣೆ ಮುಂದೂಡಿಕೆ

IMG_20230803_120203_4
ಶೀಗವಾಳು ಗ್ರಾಮ ಪಂಚಾಯಿತಿಗೆ ಪೊಲೀಸ್ ಭದ್ರತೆ ಒದಗಿಸಿರುವುದು.
Published on

ಸಾಲಿಗ್ರಾಮ: ಸದಸ್ಯರ ಹಾಜರಾತಿ ಕೊರತೆಯಿಂದ ಶೀಗವಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯನ್ನು ಆ.7ಕ್ಕೆ ಮುಂದೂಡಲಾಯಿತು.

ಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯರಿದ್ದು, ಹಿಂದುಳಿದ ವರ್ಗ ಬಿ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬೆಟ್ಟಳ್ಳಿ ಪವಿತ್ರಾ ರವಿ ಒಬ್ಬರೇ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಕೆ.ಯೋಗೇಶ್, ಕೆ.ಎಸ್.ಕೃಷ್ಣೇಗೌಡ ನಾಮಪತ್ರ ಸಲ್ಲಿಸಿದರು.

ಗುರುವಾರ ಪಂಚಾಯಿತಿ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 11 ಸದಸ್ಯರು ಗೈರಾಗಿದ್ದರು. ಹೀಗಾಗಿ ಚುನಾವಣಾಧಿಕಾರಿ ವಿನುತ್ ಚುನಾವಣೆಯನ್ನು ಮುಂದೂಡಿರುವುದಾಗಿ ಘೋಷಿಸಿದರು.

ಇಲ್ಲಿನ ಸದಸ್ಯರಲ್ಲಿ ಎರಡು ಬಣಗಳಿದ್ದು, ಒಂದು ಬಣ ಹಾಜರಾದರೆ ಮತ್ತೊಂದು ಬಣದ ಎಲ್ಲ ಸದಸ್ಯರು ಗೈರಾಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಸಾಲಿಗ್ರಾಮ ಸಬ್‌ಇನ್‌ಸ್ಪೆಕ್ಟರ್ ಕುಮುದಾ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net