8, 9 ಹಾಗೂ 10 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

application
Published on

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪೀಪಲ್ಸ್ ಪಾರ್ಕ್ ವತಿಯಿಂದ 2025-26 ನೇ ಸಾಲಿನಲ್ಲಿ 8,9 ಹಾಗೂ 10 ನೇ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ದಾಖಲಾತಿಯು ಸಂಪೂರ್ಣ ಉಚಿತವಾಗಿರುತ್ತದೆ ಕನ್ನಡ ಹಾಗೂ ಆಂಗ್ಲ ಮಾಧ್ಯಮಗಳಿಗೆ ಪ್ರವೇಶಾತಿ ಲಭ್ಯವಿದ್ದು ಅನುಭವಿ ಶಿಕ್ಷಕರಿಂದ ಬೋಧನೆ, ಪಾಠ ಬೋಧನೆಯಲ್ಲಿ ತಂತ್ರಜ್ಞಾನ ಬಳಕೆ, ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದ್ದು 9 ಹಾಗೂ 10 ನೇ ತರಗತಿಗಳಿಗೆ ಎನ್,ಎಸ್,ಕ್ಯೂ, ಎಫ್ ಕಾರ್ಯಕ್ರಮದಲ್ಲಿ ಸೌಂದರ್ಯ ಮತ್ತು ಆರೋಗ್ಯ ಸ್ವಾಸ್ಥ್ಯ ಹಾಗೂ ಮಾಹಿತಿ ತಂತ್ರಜ್ಞಾನ ವಿಷಯಗಳ ಆಯ್ಕೆಗೆ ಅವಕಾಶವಿರುತ್ತದೆ ಸಂಗೀತ, ಕ್ರೀಡೆ ಹಾಗೂ ಸಾಹಿತ್ಯಿಕ ಚಟುವಟಿಕೆಗಳಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು ಉತ್ತಮ ಕಲಿಕಾ ಪರಿಸರ ಹೊಂದಿರುತ್ತದೆ. ದೂ. ಸಂ: 9448788102 ಅನ್ನು ಸಂಪರ್ಕಿಸಬಹುದು ಎಂದು ನಜರ್ ಬಾದ್‌ನ, ಪೀಪಲ್ಸ್ ಪಾರ್ಕ್ ನಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net