ಭಿವಾಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕನಿಷ್ಠ 10 ಸಾವು

Bhiwandi building collapse 1
Published on

ಥಾಣೆ: ಮುಂಬಯಿ ಸಮೀಪದ ಭಿವಾಂಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಕನಿಷ್ಠ 10 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ 20 ಜನ ಅಲ್ಲಿ ಸಿಲುಕಿರುವ ಸಾಧ್ಯತೆ ಇದೆ.

ಭಿವಾಂಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಹನ್ನೊಂದು ಜನರನ್ನು ರಕ್ಷಿಸಲಾಗಿದೆ ಎಂದು ಥಾಣೆ ನಗರಪಾಲಿಕೆಯ ಪಿಆರ್​ಒ ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಟ್ಟಡದ ಅವಶೇಷಗಳ ನಡುವೆ ಸಿಲುಕಿದ್ದ ಮಗು ಒಂದನ್ನು ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್ (ಎನ್​ಡಿಆರ್ ಎಫ್) ತಂಡ ರಕ್ಷಣೆ ಮಾಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿರುವ ಕಟ್ಟಡ ಕುಸಿದ ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಕನಿಷ್ಠ 20 ಜನರನ್ನು ರಕ್ಷಿಸಿದ್ದಾರೆ. ಇನ್ನಷ್ಟು ಮಾಹಿತಿ ಬರಬೇಕಷ್ಟೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net