

ಜೈಪುರ: ಬಸ್ (Bus) ಟೈರ್ ಸ್ಫೋಟಗೊಂಡು ಕಾರಿಗೆ ಗುದ್ದಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯ ಮೊಖಂಪುರದಲ್ಲಿ ನಡೆದಿದೆ.
ಅಪಘಾತದ ಕುರಿತು ಮಾತನಾಡಿರುವ ಪೊಲೀಸ್ ಅಧಿಕಾರಿಯೊಬ್ಬರು, ಜೈಪುರದಿಂದ ಅಜ್ಮೇರ್ನತ್ತ ಹೊರಟ್ಟಿದ್ದ ಆರ್ಎಸ್ಆರ್ಟಿಸಿ ಬಸ್ (Bus) ಮೊಖಂಪುರದ ಬಳಿ ತೆರಳುತ್ತಿದ್ಧಾಗ ಟೈರ್ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ನಿಂದ ಜಿಗಿದು ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಬಸ್ನ (Bus) ಬಲಬದಿಯ ಟೈರ್ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.