ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; ಎಂಟು ಮಂದಿ ಸಾವು, ಹಲವರು ನಾಪತ್ತೆ

CoalMIne
Published on

ನವದೆಹಲಿ: ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ ಸಂಭವಿಸಿದ ಪರಿಣಾಮ ಎಂಟು ಮಂದಿ ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್‌ಡಿಂಗ್‌ಶಾನ್‌ ನಗರದಲ್ಲಿ ನಡೆದಿದೆ.

ಅವಶೇಷಗಳಡಿ ಸಿಲುಕಿದ್ದ ಹಲವರನ್ನು ಸುರಕ್ಷೊತವಾಗಿ ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಪಿಂಗ್‌ಡಿಂಗ್‌ಶಾನ್‌ ಟಿಯಾನನ್‌ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ (‌‌PTCMC., Ltd)ಯ ಗಣಿಯಲ್ಲಿ ಶುಕ್ರವಾರ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಘಟನೆ ನಡೆದ ವೇಳೆ 400ಕ್ಕೂ ಅಧಿಕ ಮಂದಿ ಸ್ಥಳದಲ್ಲಿದ್ದರು ಎಂದು ತಿಳಿದು ಬಂದಿದೆ.

ಅವಶೇಷಗಳಡಿ ಸಿಲುಕಿದ್ದ 380 ಮಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ. 8 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net