

ಬೆಂಗಳೂರು: ಖಾಸಗಿ ಕಾಲೇಜಿನಲ್ಲಿರುವ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಕಾಮೆಡ್-ಕೆ 2024 ಮೇ 12ರಂದು ದೇಶಾದ್ಯಂತ 28 ರಾಜ್ಯ, 189 ನಗರ ಮತ್ತು 264 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1.18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.
ಪರೀಕ್ಷೆಯು ಮೂರು ಪಾಳಿಯಲ್ಲಿ ನಡೆಯಲಿದೆ. ಬೆಳಗ್ಗೆ 8.30 ರಿಂದ 11.30, ಮಧ್ಯಾಹ್ನ 1 ರಿಂದ 4 ಹಾಗೂ 5.30 ರಿಂದ ರಾತ್ರಿ 8.30ರವರೆಗೆ ನಡೆಯಲಿದೆ. ಇದು ಆನ್ಲೈನ್ ಪರೀಕ್ಷೆ ಆಗಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಕಂಪ್ಯೂಟರ್ ಮೂಲಕ ಪರೀಕ್ಷೆ ಬರೆಯಲಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ವೇಳೆ ಪ್ರವೇಶ ಪತ್ರದ ಜತೆಗೆ ಸರ್ಕಾರ ನೀಡಿರುವ ಯಾವುದೇ ಗುರುತಿನ ಚೀಟಿ ಹಾಗೂ ಎರಡು ಪಾಸ್ಪೋರ್ಟ್ ಅಳತೆಯ ಎರಡು ಫೋಟೋ ತೆಗೆದುಕೊಂಡು ಹೋಗಬೇಕು. ಪೆನ್ಸಿಲ್ ಮತ್ತು ಪಾರದರ್ಶಕ ವಾಟರ್ ಬಾಟೆಲ್ನ್ನು ಕೇಂದ್ರದ ಒಳಗೆ ತೆಗೆದುಕೊಂಡು ಹೋಗಲು ಅವಕಾಶವಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿರುವ ಸೂಚನೆಗಳನ್ನು ಓದಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕಾಮೆಡ್&ಕೆ ಪ್ರಕಟಣೆ ಕೋರಿದೆ.