

ಬೆಂಗಳೂರು: ಪರಿಶಿಷ್ಟ ಜಾತಿ, ಸಮುದಾಯದವರ ಅಭಿವೃದ್ಧಿಗಾಗಿ ರಚನೆಯಾಗಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಭ್ರಷ್ಟಾಚಾರದ ಮಸಿ ಮೆತ್ತಿದೆ. ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿರುವ ವಿವಿಧ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರ ಇಬ್ಬರು ಜಿಲ್ಲಾ ವ್ಯವಸ್ಥಾಪಕರು ಸೇರಿ 8 ಅಧಿಕಾರಿಗಳನ್ನು ಅಮಾನತು ಮಾಡಿದ್ದರೆ, ಐವರು ಸಿಬ್ಬಂದಿಯನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಿದೆ. 2019-20, 2020-21ರ ಅವಧಿಯಲ್ಲಿನ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ನಡೆದ ಅಕ್ರಮಗಳ ಬಗ್ಗೆ 2021-22ರಲ್ಲಿ ನಿಗಮದ ಕೇಂದ್ರ ಕಚೇರಿ ಮೂಲಕ ತಪಾಸಣೆ ಕೈಗೊಳ್ಳಲಾಗಿತ್ತು.