ಹೊಂಡಕ್ಕೆ Car ಉರುಳಿ 8 ಮಂದಿ ಸಾವು

Car Accident
Published on

ಬಲರಾಮ್​ಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಹೊಂಡಕ್ಕೆ ಉರುಳಿದ ಪರಿಣಾಮ 08 ಮಂದಿ ಮೃತಟ್ಟಿರುವ ಘಟನೆ ಛತ್ತೀಸ್​​ಗಢದ ಬಲರಾಮ್​ಪುರದಲ್ಲಿ ನಡೆದಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಲಾರಿಮಾದಿಂದ ಸೂರಜ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 08 ಮಂದಿ ಮೃತಪಟ್ಟಿದ್ದಾರೆ. 

ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಹೊಂಡಕ್ಕೆ ಉರುಳಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net