ಭದ್ರಾ ಡ್ಯಾಂನಿಂದ ಪ್ರತಿ ದಿನ 8 ಸಾವಿರ ಕ್ಯೂಸೆಕ್ ಹೊರಕ್ಕೆ

bhadra
Published on

ಶಿವಮೊಗ್ಗ: ಭದ್ರಾ ಜಲಾಶಯದಿಂದ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಏ.1ರ ಸಂಜೆ 6ರಿಂದ ಪ್ರತಿ ನಿತ್ಯ 8 ಸಾವಿರ ಕ್ಯೂಸೆಕ್‌ನಂತೆ ಮೂರು ದಿನ ನೀರು ಹರಿಸಲಾಗುವುದು ಎಂದು ಭದ್ರಾ ಕಾಡಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ, ಅಧೀಕ್ಷಕ ಅಭಿಯಂತ ಚೆಲುವರಾಜು ತಿಳಿಸಿದ್ದಾರೆ.

ಆ ಭಾಗದ ಕುಡಿಯುವ ನೀರು ಹಾಗೂ ಬೆಳೆ ಸಂರಕ್ಷಣೆ ಉದ್ದೇಶದಿಂದ ನೀರು ಹರಿಸುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರಾ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಇಳಿಯುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಬಿಡುವಂತಿಲ್ಲ ಎಂದು ತಿಳಿಸಿದ್ದಾರೆ.

ನದಿ ಪಾತ್ರದಲ್ಲಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ನದಿಯಿಂದ ಅನಧಿಕೃತವಾಗಿ ಪಂಪ್‌ಸೆಟ್ ಮೂಲಕ ನೀರನ್ನು ಎತ್ತುವುದು, ಟ್ಯಾಂಕರ್ ಮೂಲಕ ನೀರಿನ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net