

ಬಳ್ಳಾರಿ: ಕರೊನಾ ಎಫೆಕ್ಟ್ ಸೇರಿ ಹಲವು ಕಾರಣಗಳಿಂದಾಗಿ ಮುಂಬರುವ ಆರು ತಿಂಗಳೊಳಗೆ ರಾಜ್ಯದಲ್ಲಿ 82 ಸಾವಿರ ಶಿಶುಗಳು ಜನನವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಕರೊನಾತಂಕ ದೂರ ಆಗಿಲ್ಲದಿರುವುದರಿಂದ ಆಯಾ ಜಿಲ್ಲೆಗಳಲ್ಲಿ ಗರ್ಭಿಣಿಯರ ಆರೋಗ್ಯದ ಕುರಿತು ಹೆಚ್ಚಿನ ಮುತುವರ್ಜಿ ವಹಿಸುವಂತೆ ಡಿಎಚ್ಒಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೆ ಆಶಾ ಕಾರ್ಯಕರ್ತೆಯರು ಮನೆಮನೆ ಸಮೀಕ್ಷೆ ನಡೆಸುತ್ತಿದ್ದು, ಗರ್ಭಿಣಿಯರು ಕಂಡುಬಂದರೆ ಅವರ ಆರೋಗ್ಯದ ಕುರಿತು ತಿಳಿವಳಿಕೆ ನೀಡಬೇಕು. ಸಾಧ್ಯವಾದರೆ ಸ್ಥಳದಲ್ಲಿಯೇ ತಾಯಿ ಕಾರ್ಡ್ ನೀಡುವಂತೆ ಸೂಚಿಸಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.