

ಹುಣಸೂರು: ನಗರ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪಟ್ಟಣದ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆ ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಸತತ 8ನೇ ವರ್ಷವೂ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ಎರಡು ದಿನ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಶಾಲೆ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಸಾಧನೆಗೈಯುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ.
ಬಾಲಕರ ವಿಭಾಗ: ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ, ಥ್ರೋಬಾಲ್‌ನಲ್ಲಿ ಪ್ರಥಮ ಮತ್ತು ದ್ವಿತೀಯ, 4100 ಮೀ.ಓಟದಲ್ಲಿ ಪ್ರಥಮ,200ಮೀ, 400ಮೀ ಮತ್ತು 60ಮೀ.ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಬಾಲಕಿಯರ ವಿಭಾಗ: ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಥ್ರೋಬಾಲ್‌ನಲ್ಲಿ ಪ್ರಥಮ, 100ಮೀ.ಓಟ ಪ್ರಥಮ ಮತ್ತು ದ್ವಿತೀಯ, 200ಮೀ.ಓಟದಲ್ಲಿ ಪ್ರಥಮ, 4100ಮೀ.ಓಟದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕ್ರೀಡಾಪಟುಗಳ ಸಾಧನೆಯನ್ನು ಮುಖ್ಯಶಿಕ್ಷಕಿ ಸಿಸ್ಟರ್ ಫಿಲೋಮಿನಾ ನೊರೋನ್ಹ, ದೈಹಿಕ ಶಿಕ್ಷಣ ಶಿಕ್ಷಕರಾದ ವಾಸುದೇವ, ರೋನಿ, ಶ್ರೀನಿವಾಸ್ ಮತ್ತು ಸಂಜಯ್ ಅಭಿನಂದಿಸಿದ್ದಾರೆ.