8ರಿಂದ ಸಮಾಜಮುಖಿ ಸಾಹಿತ್ಯ ಸಮ್ಮೇಳನ

Published on

ಕನ್ನಡದ ಕ್ರಿಯಾಶೀಲ ಮನಸ್ಸುಗಳನ್ನು ಒಂದೆಡೆ ಸೇರಿಸಿ ಚರ್ಚಿಸುವ ಉದ್ದೇಶದಿಂದ ಸಮಾಜಮುಖಿ ವೇದಿಕೆ ವತಿಯಿಂದ ನ.8 ಮತ್ತು 9ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ನಡೆಯಲಿದೆ ಎಂದು ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ತಿಳಿಸಿದರು.

ಸಮಾಜಮುಖಿ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯವಾಗಿ ಸಾಹಿತ್ಯ, ನಾಟಕ, ಕಲೆ, ಸಿನಿಮಾ, ಪರಿಸರ ಕುರಿತಾಗಿ ವಿಚಾರ ಸಂಕಿರಣಗಳು, ಸಂವಾದಗಳು, ಚರ್ಚೆಗಳು ನಡೆಯಲಿವೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿಗಳಾದ ಹಂಪನಾ, ಬರಗೂರು ರಾಮಚಂದ್ರಪ್ಪ, ಎಚ್.ಎಸ್.ಶಿವಪ್ರಕಾಶ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ, ವಿದ್ಯಾಶಂಕರ್, ಈರೇಗೌಡ, ರಾಜೇಂದ್ರ ಚೆನ್ನಿ, ಪುರುಷೋತ್ತಮ ಬಿಳಿಮಲೆ, ಸಬೀಬ ಭೂಮಿಗೌಡ, ಕೃಪಾಕರ ಸೇನಾನಿ, ಕಲೀಮ್ ಉಲ್ಲಾ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಹಲವಾರು ಸಾಹಿತಿಗಳು, ಸಂಸ್ಕೃತಿ ಚಿಂತಕರು, ಚಲನಚಿತ್ರ ಬರಹಗಾರರು, ಭಾಷಾ ತಜ್ಞರು, ಪರಿಸರವಾದಿಗಳು, ನೂರಾರು ಗಣ್ಯ ವ್ಯಕ್ತಿಗಳು ಕಾರ್ಯಕ್ರಮದ ಭಾಗಿಗಳಾಗುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net