

ಬಸ್ ಹಾಗೂ ಎಸ್ಯುವಿ ಜೀಪ್ ನಡುವೆ ಭೀಕರ ಅಪಘಾತ ನಡೆದು, 9 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಪಿಲಿಭಿತ್ನ ಪುರಾಣ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯ ಬಗ್ಗೆ ಪಿಲಿಭಿತ್ ಎಸ್ಪಿ ಜೈಪ್ರಕಾಶ್ ಯಾದವ್ ಅವರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ರೋಡ್ ವೇ ಬಸ್ ಮತ್ತು ಜೀಪ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಸ್ ಹಾಗೂ ಜೀಪ್ನಲ್ಲಿದ್ದವರೆಲ್ಲ ಸೇರಿ 9 ಮಂದಿ ಮೃತಪಟ್ಟಿದ್ದು, 30 ಜನರು ಗಾಯಗೊಂಡಿದ್ದಾರೆ. ಅದರಲ್ಲೂ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್ ಲಖನೌದಿಂದ ಪಿಲಿಭಿತ್ಗೆ ಆಗಮಿಸುತ್ತಿತ್ತು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)