

ಮಧ್ಯ ಪ್ರದೇಶ: ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಮೇಲ್ವಿಚಾರಣೆಗೆ ಒಂಭತ್ತು ಸದಸ್ಯರನ್ನೊಳಗೊಂಡ ತಜ್ಞರ ತಂಡವನ್ನು ನೇಮಕ ಮಾಡಲಾಗಿದೆ. ಈ ತಂಡ ಚೀತಾಗಳ ಬೆಳಗಣಿಗೆ ಹಾಗೂ ಅವುಗಳ ಆರೋಗ್ಯದ ಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿ ಚೀತಾಗಳ ಸಂತತಿಯನ್ನು ಮರುಸ್ಥಾಪಿಸುವ ಉದ್ಧೇಶದ ಸಲುವಾಗಿ ನಮೀಬಿಯಾ ದೇಶದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು. ಈ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿತ್ತು.
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳ ಚಲನವಲನವನ್ನು ಗಮನಿಸಲಾಗುತ್ತಿದ್ದು, ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬಾಕಿಯಿದೆ. ಅದಾದ ಬಳಿಕೆ ನಮೀಬಿಯಾ ಚೀತಾಗಳನ್ನು ವೀಕ್ಷಿಸಬಹುದು ಎಂದು ಮನ್ಕೀ ಬಾತ್ನ 93ನೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.(ಏಜೆನ್ಸೀಸ್)