

ಬೆಂಗಳೂರು: ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಂಎಫ್) ತನ್ನ ತುಪ್ಪದ ದರವನ್ನು ದಿಢೀರ್ ಏರಿಸಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ.
ಒಂದು ಲೀಟರ್ ಕೆಎಂಎಫ್ ತುಪ್ಪಕ್ಕೆ 90 ರೂಪಾಯಿ ಹೆಚ್ಚಳವಾಗಿ, ಈಗ ಇದು 700 ರೂಪಾಯಿಗಳ ದರಕ್ಕೆ ಮಾರಾಟವಾಗಲಿದೆ. ನಂದಿನಿ ತುಪ್ಪದ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುತ್ತಿದೆ.
ಒಂದು ಲೀಟರ್ ನಂದಿನಿ ತುಪ್ಪಕ್ಕೆ ಈಗ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ಮೊದಲು ಮೊದಲು 610 ರೂಗೆ ಒಂದು ಲೀಟರ್ ತುಪ್ಪ ಮಾರಾಟ ಮಾಡಲಾಗುತ್ತಿತ್ತು. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.
ಇತ್ತೀಚಿಗಷ್ಟೇ ಜಿಎಸ್ಟಿ ದರ ಇಳಿಕೆಯಾದ ನಂತರ ನಂದಿನಿ ತುಪ್ಪದ ಬೆಲೆ ಲೀಟರ್ಗೆ 40 ರೂ. ಇಳಿಕೆ ಮಾಡಿತ್ತು. ಆದರೆ, ಇದೀಗ ತುಪ್ಪಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ದಿಢೀರ್ ಆಗಿ ದರ ಏರಿಕೆ ಮಾಡಿದೆ.
ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ ದರ ಏರಿಕೆಯ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ತುಪ್ಪದ ದರ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
50 ಎಂಎಲ್ – 47 ರೂಪಾಯಿ, 100 ಎಂಎಲ್ – 75 ರೂಪಾಯಿ, 200 ಎಂಎಲ್ – 155–165 ರೂಪಾಯಿ, 500 ಎಂಎಲ್ – 350–360ರೂಪಾಯಿ, 1 ಲೀಟರ್ (1000 ಎಂಎಲ್) – 700–720 ರೂಪಾಯಿ ಇರಲಿದೆ.