"ಶಕ್ತಿ"ಯಿಂದ ಶೇ.92ರಷ್ಟು ಮಹಿಳೆಯರು ಸಂತೋಷ!

Dk Shivakumar
Published on

ಬೆಂಗಳೂರು: "ಶಕ್ತಿ" ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರು ತಮ್ಮ ಕುಟುಂಬ ಸಮೇತರಾಗಿ ಸುತ್ತಾಡಿ, ಉಳಿದ ದುಡ್ಡನ್ನು ತಮ್ಮ ಅಗತ್ಯಗಳಿಗೆ ಖರ್ಚು ಮಾಡುತ್ತಿದ್ದಾರೆ. ನಮ್ಮ ಸಮೀಕ್ಷೆಯಲ್ಲಿ ಈ ಯೋಜನೆಯಿಂದ ಶೇ.92ರಷ್ಟು ಮಹಿಳೆಯರು ಸಂತೋಷಗೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅವಕಾಶ ಕಲ್ಪಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕವಾಗಿ 3 ಸಾವಿರ ಕೋಟಿ ಹೊರೆ ಬೀಳಬಹುದಾದರೂ, ಈ ಯೋಜನೆ ಪರಿಣಾಮವಾಗಿ ದೇವಾಲಯಗಳಲ್ಲಿ ಆದಾಯ ಹೆಚ್ಚಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net