99 ಬಾರಿ ನಿಯಮ ಉಲ್ಲಂಸಿ 32 ಸಾವಿರ ರೂ. ದಂಡ ಪಾವತಿ

pulakeshi nagara
Published on

ಬೆಂಗಳೂರು:
ಬರೋಬರಿ 99 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ದ್ವಿಚಕ್ರ ವಾಹನ ಮಾಲೀಕನಿಂದ ಪುಲಕೇಶಿನಗರ ಸಂಚಾರ ಠಾಣೆ ಪೊಲೀಸರು ಶನಿವಾರ 32,500 ರೂ. ದಂಡ ಸಂಗ್ರಹಿಸಿದ್ದಾರೆ.
ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಎಎಸ್‌ಐ ನರಸಿಂಹ ಜಟ್ಟಿ, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ಪರಿಶೀಲನೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ದ್ವಿಚಕ್ರ ವಾಹನವೊಂದನ್ನು ಪರಿಶೀಲಿಸಿದಾಗ ಈ ಹಿಂದೆ 99 ಸಂಚಾರ ನಿಯಮ ಉಲ್ಲಸಿದ ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿತ್ತು. ಇದೀಗ ವಾಹನ ಚಾಲಕನಿಂದ 32,500 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net