

ಕೇಂದ್ರ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ನೆಹರು ಯುವ ಕೇಂದ್ರಗಳ ಸಹಯೋಗದಲ್ಲಿ ಡಿ.9ರಿಂದ 14ರವರೆಗೆ ನಗರದ ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಕಾಶ್ಮೀರಿ ಯುವಜನ ವಿನಿಮಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಎಸ್.ಚವರೆ ಹೇಳಿದರು.
ಡಿ.10ರಂದು ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾಶ್ಮೀರಿ ಯುವಜನರಿಗಾಗಿ ಬೇರೆ ಬೇರೆ ರಾಜ್ಯಗಳ ಸಂಸ್ಕೃತಿ, ಕಲೆ, ಆಹಾರ ಪದ್ಧತಿ, ಆಚಾರ ವಿಚಾರ, ಉಡುಗೆ ತೊಡುಗೆ, ಸ್ಥಳ ಪರಿಚಯ, ಭಾಷಾ ಕಲಿಕೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪರಿಚಯ ಮಾಡಿಕೊಡುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.