

ಉತ್ತರ ಕನ್ನಡ: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕುಮಟಾ ತಾಲೂಕಿನ ಕಡ್ಲೆ ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಣಮ್ ಈಶ್ವರ್ ನಾಯ್ಕ(18) ಆತ್ಮಹತ್ಯೆ ಮಾಡಿಕೊಂಡವ. ಎ.ವಿ. ಬಾಳಿಗಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. 4 ವಿಷಯಗಳಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಜಿಗುಪ್ಸೆಗೊಂಡು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಕುಮಟಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.