ನಾಳೆ, ನಾಡಿದ್ದು ಬೆಂಗಳೂರಲ್ಲಿ ಭಾರಿ ಮಳೆ: 7 ಜಿಲ್ಲೆಯಲ್ಲಿ 4 ದಿನ ಯೆಲ್ಲೋ ಅಲರ್ಟ್​

rain
Published on

ಬೆಂಗಳೂರು: ಅರಬ್ಬಿ ಸಮುದ್ರಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ.

ನ.18, 19ರಂದು ನಗರದಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಕನಿಷ್ಠ ಹಾಗೂ ಗರಿಷ್ಠ ತಾಪಮಾನದಲ್ಲಿ ಸರಾಸರಿ 3-4 ಡಿಗ್ರಿ ಸೆಲ್ಸಿಯೆಸ್ ಕುಸಿತವಾಗಿದೆ. ಮಂಗಳವಾರ ಕನಿಷ್ಠ ತಾಪಮಾನದಲ್ಲಿ 18.3 ಮತ್ತು ಗರಿಷ್ಠ ತಾಪಮಾನದಲ್ಲಿ 27.6 ಡಿಗ್ರಿ ಸೆಲ್ಸಿಯೆಸ್ ದಾಖಲಾಗಿತ್ತು.

ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರವೂ ಮಳೆ ಸುರಿದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ನ.17ರಿಂದ ನ.20ರವರೆಗೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ನ.18,19 ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net