

ಬೆಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಕ ಹೆಜ್ಜೆ ಇಡಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಮುಂದಾಗಿದೆ. ವಿದ್ಯಾರ್ಥಿಗಳಿಗೆ ತ್ವರಿತವಾಗಿ ಪದವಿ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ ನಾಲ್ಕು ವರ್ಷದ ಪದವಿ ವ್ಯಾಸಂಗವನ್ನು ಮೂರು ವರ್ಷಗಳಲ್ಲಿ ಹಾಗೂ ಮೂರು ವರ್ಷಗಳ ಡಿಗ್ರಿ ಕೋರ್ಸನ್ನು ಎರಡೂವರೆ ವರ್ಷದಲ್ಲಿ ಪೂರ್ಣಗೊಳಿಸುವ ನಿಯಮವನ್ನು ಆಯೋಗ ರೂಪಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಯಾಗಲಿದೆ.
ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಕಾಲೇಜುಗಳ ಸಮಾವೇಶದಲ್ಲಿ ಯುಜಿಸಿ ಅಧ್ಯಕ್ಷ ಪ್ರೊ.ಎಂ. ಜಗದೀಶಕುಮಾರ್ ಅವರೇ ಈ ವಿಚಾರ ಹಂಚಿಕೊಂಡಿದ್ದಾರೆ. ಶೈಕ್ಷಣಿಕ ಅವಧಿಯನ್ನು ಕಡಿಮೆಗೊಳಿಸುವ ಚಿಂತನೆಯು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ನೇತೃತ್ವದ ಸಮಿತಿ ನೀಡಿದ ಶಿಫಾರಸು ಆಧರಿಸಿದೆ. ಈಗಾಗಲೇ ಹೊಸ ಯೋಜನೆಯನ್ನು ಯುಜಿಸಿ ಸಾಮಾನ್ಯ ಸಭೆಯು ಅಂಗೀಕರಿಸಿದೆ. ಈ ನಿಟ್ಟಿನಲ್ಲಿ ವಿಸ್ತೃ ಮಾರ್ಗಸೂಚಿಗಳನ್ನು ಶೀಘ್ರದಲ್ಲಿ ಹೊರಡಿಸಲಾಗುವುದು ಎಂದು ಜಗದೀಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಕೋರ್ಸ್ಅನ್ನು ಎಷ್ಟು ತ್ವರಿತವಾಗಿ ಪೂರ್ಣಗೊಳಿಸುತ್ತಾರೆ ಎಂಬುದು ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿದೆ. ಎರಡೇ ವರ್ಷದಲ್ಲಿ ಅಗತ್ಯ ಕ್ರೆಡಿಟ್ಗಳನ್ನು (ಅಂಕ) ಗಳಿಸಿ ಎಂದರೆ ವಿದ್ಯಾರ್ಥಿಗಳಲ್ಲಿ ಒತ್ತಡಕ್ಕೆ ಕಾರಣವಾಗಬಹುದು. ಹೀಗಾಗಿ ಪ್ರತಿಭಾವಂತರು ಆರು ತಿಂಗಳಿನಿಂದ ಒಂದು ವರ್ಷದ ಅವಧಿಯನ್ನು ಉಳಿಸಬಹುದು ಎಂದು ನಿರೀಕ್ಷಿಸಿದ್ದೇವೆ ಎಂದು ಜಗದೀಶ್ ಕುಮಾರ್ ಹೇಳಿದ್ದಾರೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆ ಪದವಿ ಕೋರ್ಸ್ ಗಳಿಗೆ ಯುಜಿಸಿ ಸರ್ಜರಿ, ಶೈಕ್ಷಣಿಕ ಅವಧಿ ಕಡಿತಕ್ಕೆ ಮಹತ್ವದ ನಿರ್ಧಾರ ಬೇಕಿದ್ರೆ ಬ್ರೇಕ್ ಪಡೆಯಿರಿ. ಪದವಿ ಕೋರ್ಸ್ಗಳ ಅವಧಿ ಕಡಿತದ ಜತೆಯಲ್ಲೇ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಹೊಸ ನಿಯಮದನ್ವಯ, ಅಗತ್ಯ ಬಿದ್ದರೆ ಪದವಿ ಪೂರ್ಣಗೊಳಿಸಲು ನಿಗದಿಗಿಂತ ಹೆಚ್ಚಿನ ಅವಕಾಶ ಪಡೆದುಕೊಳ್ಳಬಹುದು. ಕೆಲ ಸಮಯದ ವಿರಾಮದ ಬಳಿಕ ವಿದ್ಯಾಭ್ಯಾಸ ಮುಂದುವರಿಸಬಹುದು. ಅವಧಿಯನ್ನು ಹಿಗ್ಗಿಸುವ ಅಥವಾ ಕುಗ್ಗಿಸುವ ಅವಕಾಶವನ್ನು ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳಿಗೆ ಒದಗಿಸಲಾಗಿದೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿವರ್ತನೆಗಳನ್ನು ಉಂಟು ಮಾಡಲಿದೆ. ಜತೆಗೆ, ಶಿಕ್ಷಣವನ್ನು ಕಡಿಮೆ ವೆಚ್ಚದಾಯಕವನ್ನಾಗಿಸುವ ಹೊಣೆಯು ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಯುಜಿಸಿ ಅಧ್ಯಕ್ಷರು ಹೇಳಿದ್ದಾರೆ. ವಿದ್ಯಾರ್ಥಿಗಳು ಯಾವ ಹಂತದವರೆಗೆ ಮುಂದುವರಿಯಬಲ್ಲರು, ಸಮಾಜದಲ್ಲಿ ಪಡೆಯುವ ಸ್ಥಾನಮಾನ ಹಾಗೂ ತಮ್ಮ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಗಳಿಸುವ ಅಂಶವು ಉನ್ನತ ಶಿಕ್ಷಣದಲ್ಲಿನ ಸಮಾನತೆ, ಒಳಗೊಳ್ಳುವಿಕೆ ಹಾಗೂ ಸರ್ವರಿಗೂ ಲಭ್ಯವಾಗುವ ಗುಣಗಳನ್ನು ಆಧರಿಸಿದೆ ಎಂದು ಯುಜಿಸಿ ಅಧ್ಯಕ್ಷರು ಹೇಳಿದ್ದಾರೆ.
ಕಡಿಮೆ ಅವಧಿಯಲ್ಲಿ ಶಿಕ್ಷಣ ಪೂರೈಸಲು ಸಮರ್ಥವಿರುವ ವಿದ್ಯಾರ್ಥಿಗಳು ಆರು ತಿಂಗಳಿನಿಂದ ಒಂದು ವರ್ಷದ ಅವಧಿ ಉಳಿಸಬಹುದು. | ಪ್ರೊ.ಎಂ. ಜಗದೀಶಕುಮಾರ್ ಯುಜಿಸಿ ಅಧ್ಯಕ್ಷ ಯುಜಿಸಿ ಅಧ್ಯಕ್ಷರು ಪದವಿ ವ್ಯಾಸಂಗ ಅವಧಿಯನ್ನು ನಾಲ್ಕು ವರ್ಷದಿಂದ ಮೂರು ವರ್ಷಕ್ಕೆ ಇಳಿಸುವ ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶೀಘ್ರ ಮಾರ್ಗಸೂಚಿ ಪ್ರಕಟವಾಗಲಿದೆ. ಆ ಬಳಿಕ ಅಧ್ಯಯನ ನಡೆಸಿ ಅನುಷ್ಠಾನಕ್ಕೆ ತರಲಾಗುವುದು. | ಡಾ.ಎಸ್. ವಿದ್ಯಾಶಂಕರ ವಿಟಿಯು ಕುಲಪತಿ https://www.vijayavani.net/who-is-the-first-rcb-batter-to-score-fifty-in-ipl