

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿಯಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ವಿವಿಧ ಭಾಗಗಳಿಂದ 41,162 ಅರ್ಜಿಗಳು ಆನ್ಲೈನ್ ಪೋರ್ಟಲ್ ಮೂಲಕ ಸಲ್ಲಿಕೆಯಾಗಿವೆ. 87 ಜನ ಪೂರ್ಣಾಂಕ ಪಡೆದವರಿದ್ದಾರೆ. ಎಲ್ಲ ಅಂಕಪಟ್ಟಿಗಳನ್ನು ಪರಿಶೀಲಿಸಿ ದೃಢೀಕರಿಸುವಂತೆ ಪಿಯು ಬೋರ್ಡ್ಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ತಿಳಿಸಿದ್ದಾರೆ.