

ಪಾಟ್ನಾ: ಕುರ್ಕುರೆ ಮತ್ತು ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು10 ಮಂದಿ ಮೃತಪಟ್ಟ ಘಟನೆ ಬಿಹಾರದ ಮುಜಾಫರ್ ನಗರದಲ್ಲಿ ಸಂಭವಿಸಿದೆ.
ಮುಜಾಫರ್ನಗರ ಕೈಗಾರಿಕಾ ವಲಯದಲ್ಲಿರುವ 'ಮೋದಿ ಕುರ್ಕುರೆ ಮತ್ತು ನೂಡಲ್ಸ್' ಕಾರ್ಖಾನೆಯಲ್ಲಿ ಭಾನುವಾರ ಬೆಳಗ್ಗೆ ಬಾಯ್ಲರ್ ಸ್ಫೋಟಗೊಂಡಿದ್ದು, ಭಾರೀ ಶಬ್ದ 5 ಕೀ.ಮಿ. ದೂರದ ವರೆಗೂ ಕೇಳಿಸಿದೆ. ಅಕ್ಕಪಕ್ಕದ ಕಾರ್ಖಾನೆಗಳ ಕಟ್ಟಗಳಿಗೂ ಹಾನಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.
ಅವಘಡ ಸಂಬಂವಿಸುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿಶಾಮಕ ವಾಹನ ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು-ನೋವು ಹೆಚ್ಚಾಗುವ ಸಾಧ್ಯತೆ ಇದೆ. (ಏಜೆನ್ಸೀಸ್)