ಕೋಲಾರ ಮೆಡಿಕಲ್ ಕಾಲೇಜಿನಲ್ಲಿ ಕರೊನಾ ಸ್ಫೋಟ: 33 ವಿದ್ಯಾರ್ಥಿಗಳಿಗೆ ಸೋಂಕು

coronavirus
Published on

ಕೋಲಾರ: ಮಹಾಮಾರಿ ಕರೊನಾ, ರೂಪಾಂತರಿ ಹೊಸ ವೈರಸ್​ ಒಮಿಕ್ರಾನ್​ ಸೋಂಕಿತರ ಸಂಖ್ಯೆ ದಿನೇದಿನೆ ಉಲ್ಬಣಿಸುತ್ತಿದ್ದು, ರಾಜ್ಯದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ವಿದ್ಯಾರ್ಥಿಗಳಲ್ಲೂ ಕರೊನಾ ಸೋಂಕು ಕಾಣಿಸಿಕೊಂಡು ಮತ್ತಷ್ಟು ತಲ್ಲಣ ಮೂಡಿಸಿದೆ.

ಕೋಲಾರದ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಕರೊನಾ ಸ್ಫೋಟಗೊಂಡಿದೆ. ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟಿವ್ ಬಂದಿದ್ದು, ಕಾಲೇಜಿನ ಹಾಸ್ಟೆಲ್ ಅನ್ನು ಕಂಟೋನ್ಮೆಂಟ್ ಝೋನ್ ಮಾಡಲಾಗಿದೆ.

ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ 1105 ಜನರಿಗೆ ಕರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 33 ಮಂದಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net