

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಜಗದೀಶ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಪತಿ ಜಗದೀಶ್ ಜತೆ ಕೂತಿರುವ ವಿಶೇಷ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ.
ವಿಶೇಷ ಫೋಟೋ ಜತೆಗೆ 'ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ' ಎಂದು ಫೇಸ್ಬುಕ್ನಲ್ಲಿ ಅಮೂಲ್ಯ ಬರೆದುಕೊಂಡಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಮೂಲ್ಯ ದಂಪತಿಗೆ ಶುಭ ಕೋರುತ್ತಿದ್ದಾರೆ. ಅದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
ಬಾಲನಟಿಯಾಗಿ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಮೂಲ್ಯ, 2007ರಲ್ಲಿ 'ಚೆಲುವಿನಾ ಚಿತ್ತಾರ' ಸಿನಿಮಾದಲ್ಲಿ ನಾಯಕಿಯಾಗಿ ತೆರೆ ಮೇಲೆ ಮಿಂಚಿದ್ದರು. ಬಹುಬೇಡಿಕೆಯ ನಟಿಯಾಗಿದ್ದಾಗಲೇ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ಜಗದೀಶ್ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.