ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅನೂಪ್​ ಚಂದ್ರ ಪಾಂಡೆ ನೇಮಕ

Anup Chandra Pandey
Published on

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ಉತ್ತರ ಪ್ರದೇಶ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆ ಅವರನ್ನ ನೇಮಿಸಿ ಕೇಂದ್ರ ಕಾನೂನು ಮತ್ತು ಸಂಸದೀಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಭಾರತೀಯ ಆಡಳಿತ ಸೇವೆಯ 1984ರ ಕೇಡರ್​​ನ ಅಧಿಕಾರಿಯಾಗಿದ್ದ ಅನೂಪ್ ಚಂದ್ರ ಪಾಂಡೆ, 2019ರ ಆಗಸ್ಟ್​ನಲ್ಲಿ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದರು. ಇದೀಗ ಇವರನ್ನು ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿದ್ದಾರೆ.

ಚುನಾವಣಾ ಆಯೋಗದ ಮೂವರು ಮುಖ್ಯಸ್ಥರ ಪೈಕಿ ಒಂದು ಸ್ಥಾನಕ್ಕೆ ಅನೂಪ್​ ಚಂದ್ರ ಅವರನ್ನು ನೇಮಿಸಲಾಗಿದೆ. ಇವರೊಂದಿಗೆ ರಾಜೀವ್ ಕುಮಾರ್ ಕೂಡ ಚುನಾವಣಾ ಆಯುಕ್ತರಾಗಿ, ಸುಶೀಲ್ ಚಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net