

ರಾಮನಗರ: ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯು) ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಸಿಕ 6000 ರೂಪಾಯಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. 18 ರಿಂದ 45 ವರ್ಷದೊಳಗಿನ ಅಂಗವಿಕಲರು ಅರ್ಜಿ ಸಲ್ಲಿಸಬಹುದು. ಉತ್ತಮ ಆರೋಗ್ಯ ಹೊಂದಿರಬೇಕು, ಸ್ಥಳೀಯ ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜತೆಗೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು.
ಆಸಕ್ತರು ಫೆ.28ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ರಾಮನಗರ ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣಕ್ಕೆ ಸಲ್ಲಿಸಬಹುದು. ವಿವರಗಳಿಗೆ ಕನಕಪುರ ತಾಲೂಕಿನ ಎಂಆರ್ಡಬ್ಲ್ಯು ಡಿ.ಎಸ್. ನಟರಾಜು (9986001574) ಇವರನ್ನು ಸಂಪರ್ಕಿಸಬಹುದು.