ಸೇನಾ ಹೆಲಿಕಾಪ್ಟರ್​ ಪತನ: 11ಕ್ಕೇರಿದ ಸಾವಿನ ಸಂಖ್ಯೆ, ಬಿಪಿನ್​ ರಾವತ್​ ಸ್ಥಿತಿ ಗಂಭೀರ, ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ

1199670
Published on

ಚೆನ್ನೈ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 11ಕ್ಕೇರಿದ್ದು, ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಅವರ ಸ್ಥಿತಿ ಗಂಭೀರವಾಗಿದೆ. ಈ ದುರಂತ ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದ್ದು, ಬಿಪಿನ್​ ರಾವತ್​ ಚೇತರಿಕಾಗಿ ದೇಶಾದ್ಯಂತ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ.

ವೆಲ್ಲಿಂಗ್ಟನ್​ನ ಸೇನಾ ಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಸೇರಿದಂತೆ 14 ಮಂದಿ ಬುಧವಾರ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಇನ್ನೇನು ಕೆಲವೇ ಕ್ಷಣದಲ್ಲಿ ಲ್ಯಾಂಡಿಂಗ್​ ಆಗಬೇಕು ಅನ್ನುವಷ್ಟರಲ್ಲಿ ಹೆಲಿಕಾಪ್ಟರ್​ ಪತನಗೊಂಡಿದೆ.

ಬಿಪಿನ್​ ರಾವತ್​ ಅವರಿದ್ದ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸುತ್ತಿದ್ದವರ ಹೆಸರು ಇಲ್ಲಿದೆ
ಬಿಪಿನ್​ ರಾವತ್​ ಅವರಿದ್ದ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸುತ್ತಿದ್ದವರ ಹೆಸರು ಇಲ್ಲಿದೆ

ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಹೊತ್ತಿಉರಿದ ದೃಶ್ಯ ಇದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net