ಕೋವಿಡ್​19: ವಾಜಪೇಯಿ ಸೋದರ ಸೊಸೆ, ಮಾಜಿ ಸಂಸದೆ ಕರುಣಾ ಶುಕ್ಲಾ ನಿಧನ

karuna shukla
Published on

ರಾಯ್ಪುರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧಿ, ಮಾಜಿ ಸಂಸದೆ, ಕಾಂಗ್ರೆಸ್ ಹಿರಿಯ ಮುಖಂಡೆ ಕರುಣಾ ಶುಕ್ಲಾ ಮಂಗಳವಾರ ಬೆಳಗ್ಗೆ ಕೋವಿಡ್​ ಸೋಂಕಿನಿಂದ ಮೃತಪಟ್ಟಿದ್ದಾರೆ.

ವಾಜಪೇಯಿ ಅವರ ಸೋದರ ಸೊಸೆ ಕರುಣಾ ಶುಕ್ಲಾ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ರಾಯ್ಪುರದ ರಾಮಕೃಷ್ಣ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದರು. ಇದನ್ನೂ ಓದಿರಿ ಕರೊನಾ ಸಂಕಷ್ಟ: ಹಸಿವಾಗ್ತಿದೆ ಊಟ ಕೊಡಿ… ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಭಿಕ್ಷೆ ಬೇಡಿದ ವಲಸೆ ಕಾರ್ಮಿಕರು!

ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಶುಕ್ಲಾ, ಮೂರು ದಶಕ ಕಾಲ ಬಿಜೆಪಿಯಲ್ಲಿ ಸಕ್ರಿಯವಾಗಿದ್ದರು. 2013ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದರು. 2018ರ ಛತ್ತೀಸ್​ಗಢ ವಿಧಾನಸಭೆ ಚುನಾವಣೆಯಲ್ಲಿ ರಾಜನಂದಗಾಂವ್ ಕ್ಷೇತ್ರದಲ್ಲಿ ಮಾಜಿ ಸಿಎಂ ರಮಣ್ ಸಿಂಗ್ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

ಕರುಣಾ ಶುಕ್ಲಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಛತ್ತೀಸ್​ಗಢ ಸಿಎಂ ಭೂಪೇಶ್​ ಬಾಘೇಲ್, ನನ್ನ ಪಾಲಿಗೆ ತಾಯಿಯಂತಿದ್ದ ಕರುಣಾ ಶುಕ್ಷಾ ಅವರ ನಿಧನ ಸುದ್ದಿ ಕೇಳಿ ಆಘಾತವಾಯಿತು. ನಿರ್ದಯಿ ಕರೊನಾ... ಎಂದು ಟ್ವೀಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net