ಬೆಡ್​​ ಬ್ಲಾಕಿಂಗ್​ ಹಗರಣ: ಹೈಕೋರ್ಟ್​ಗೆ ತೇಜಸ್ವಿ ಸೂರ್ಯ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ

tejaswi surya
Published on

ಬೆಂಗಳೂರು: ಕೋವಿಡ್​ ವಾರ್ಡ್​ನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧ ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.

ಬೆಡ್ ಬ್ಲಾಕಿಂಗ್ ಹಗರಣದ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಹೈಕೋರ್ಟ್‌ಗೆ ವರದಿ ಸಲ್ಲಿಸಲು ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಮೇಲಾಗಿ ರಾಜಕೀಯ ಪ್ರೇರಿತವಾದ ಈ ಅರ್ಜಿಯನ್ನು ಪಿಐಎಲ್ ವ್ಯಾಪ್ತಿಯಡಿ ಪರಿಗಣಿಸಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಅರ್ಜಿ ಇತ್ಯರ್ಥ ಪಡಿಸಿದೆ.

ಒಂದೇ ಕೋಮನ್ನು ಗುರಿಯಾಗಿಟ್ಟುಕೊಂಡು ಸಂಸದರು ಮಾಡಿರುವ ಆರೋಪದ ಮೇರೆಗೆ ಹಾಸಿಗೆ ಬ್ಲಾಕಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ‌17 ವಾರ್ ರೂಮ್ ನೌಕರರ ಅಮಾನತು ಪಡಿಸಿರುವುದು ಕಾನೂನು ಬಾಹಿರ ಕ್ರಮ. ಆದ್ದರಿಂದ, ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಯುವ ಕಾಂಗ್ರೆಸ್‌ನ ವೈ.ಬಿ. ಶ್ರೀವತ್ಸ ಪಿಐಎಲ್ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net