ಶಿರಾಡಿ ಘಾಟ್​ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ, ಬದಲಿ ಮಾರ್ಗದಲ್ಲಿ ವಾಹನ ಸಂಚಾರ

ga tankar accident
Published on

ಸಕಲೇಶಪುರ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್​ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಅನಿಲ ಸೋರಿಕೆಯಾಗುತ್ತಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್​ನಲ್ಲಿ ಕೆ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ತದನಂತರ ಘಟನೆ ನಡೆದ ಸ್ಥಳ ಹೊರತುಪಡಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ. ಭಾರತ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸಿಲುಕಿದ್ದ ಚಾಲಕನನ್ನು ಕ್ರೇನ್ ಬಳಸಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net