

ಬಳ್ಳಾರಿ: ಭಾರತ್ ಜೋಡೋ ಯಾತ್ರೆಗೆ ಬಂದಿದ್ದ ಕಾಂಗ್ರೆಸ್ ನಾಯಕರೊಬ್ಬರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸದ್ಯ ಕರ್ನಾಟಕದಲ್ಲಿದೆ. ಇಂದು ಗಡಿಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್ನ ಬೃಹತ್ ಸಮಾವೇಶ ನಡೆಯುತ್ತಿದೆ. ಪಾದಯಾತ್ರೆ ಹಾಗೂ ಸಮಾವೇಶ ಹಿನ್ನೆಲೆ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದಲೂ ಜನರು ಆಗಮಿಸಿದ್ದಾರೆ. ಹಾಗೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶದ ಕಾಂಗ್ರೆಸ್ನ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ದಾದಾ ಗಾಂಧಿ ಅವರೂ ಆಗಮಿಸಿದ್ದರು. ಆಂಧ್ರ-ಕರ್ನಾಟಕ ಗಡಿ ಗ್ರಾಮ ಹೀರೇಹಾಳ್ ಸಮೀಪ ಪಾದಯಾತ್ರೆ ವೇಳೆ ನಿನ್ನೆ(ಶುಕ್ರವಾರ) ಸಂಜೆ ಎದೆನೋವಿನಿಂದ ಕುಸಿದು ಬಿದ್ದರು.
ಕೂಡಲೇ ಅವರನ್ನ ದಾದಾ ಗಾಂಧಿ ಅವರನ್ನು ಬಳ್ಳಾರಿಯ ಹೃದಯಾಲಯಕ್ಕೆ ಕಾಂಗ್ರೆಸ್ ಕಾರ್ಯಕರ್ಯರು ದಾಖಲಿಸಿದ್ದಾರೆ. ಚಿಕಿತ್ಸೆ ಮುಂದುವರಿದಿದೆ.