

ಮುಂಬೈ: ಇಲ್ಲಿನ ನಾಗಪಾದ ಮಾಲ್ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, 24 ಫೈರ್ ಇಂಜಿನ್ಗಳು, 16 ಜಂಬೋ ಟ್ಯಾಂಕ್ಗಳು ಹಾಗೂ 250ಕ್ಕೂ ಅಧಿಕ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಇದನ್ನು ಲೆವೆಲ್-5 ಅಗ್ನಿಆಕಸ್ಮಿಕ ಎಂದು ಘೋಷಿಸಿದ್ದಾರೆ.
ಗುರುವಾರ ರಾತ್ರಿ ಒಂಬತ್ತು ಗಂಟೆಗೇ ಬೆಂಕಿ ತಗುಲಿದ್ದು, ಬೆಳಗಾಗುವಷ್ಟರಲ್ಲಿ ಧಗಧಗಿಸುವ ಬೆಂಕಿಯ ಕೆನ್ನಾಲಗೆಗಳು ಕಾಣಿಕೊಂಡಿವೆ. ಬೆಂಕಿಯನ್ನು ಆರಿಸಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಮಾಲ್ ಪಕ್ಕದ 55 ಮಹಡಿಯ ಕಟ್ಟಡವನ್ನು ತೆರವುಗೊಳಿಸಲಾಗಿದ್ದು, ನಿವಾಸಿಗರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.
ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್, ಶಾಸಕ ಅಮಿನ್ ಪಟೇಲ್ ಸ್ಥಳಕ್ಕೆ ಭೇಟಿ ನೀಡಿದ್ದು, ಪಾಲಿಕೆ, ಪೊಲೀಸ್ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ. (ಏಜೆನ್ಸೀಸ್)