ವಿಜಯದಶಮಿ ಹಬ್ಬದ ದಿನವೇ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

accident
Published on

ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ.

ರಾಯಚೂರು ನಗರದ ತಿಮ್ಮಪೂರ ಪೇಟೆ ನಿವಾಸಿಗಳಾದ ದೀಪಕ್ (22) ಮತ್ತು ಹುಸೇನ್(23) ಮೃತರು. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್​ನಲ್ಲಿ ತೆರಳುತ್ತಿದ್ದ ಇವರಿಗೆ ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಅಥವಾ ಬೈಕ್​ ಸ್ಕಿಡ್​ ಆಗಿ ಬಿದ್ದು ಈ ಅಪಘಾತ ಸಂಭವಿಸಿರಬೇಕು ಎನ್ನಲಾಗಿದೆ. ವಿಜಯದಶಮಿ ಹಬ್ಬದ ಮೂಡ್​ನಲ್ಲಿದ್ದ ಸ್ಥಳೀಯರು ಏನೋ ಶಬ್ದವಾಯಿತೆಂದು ರಸ್ತೆ ಬಳಿ ಓಡಿಬಂದರು. ರಕ್ತಸಿಕ್ತವಾಗಿ ಬಿದ್ದಿದ್ದ ಮೂವರ ದೃಶ್ಯ ಕಂಡು ಬೆಚ್ಚಿಬಿದ್ದರು. ಕೂಡಲೇ ಆಂಬುಲೆನ್ಸ್​ಗೆ ಕರೆ ಮಾಡಿ ಗಾಯಾಳುವನ್ನ ಆಸ್ಪತ್ರೆಗೆ ರವಾನಿಸಿದರು. ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net