ಹಿಜಾಬ್​ ನಂತರದ ಬೆಳವಣಿಗೆ ಯಾರಿಗೂ ಶೋಭೆ ತರಲ್ಲ: ಬಿ.ವೈ. ವಿಜಯೇಂದ್ರ

1254770
Published on

ಗದಗ: ಹಿಜಾಬ್​ ವಿಚಾರವಾಗಿ ಶಾಲೆ ಮಕ್ಕಳ ಮನಸ್ಸನ್ನೂ ಕದಡಿದರು. ಹೈಕೋರ್ಟ್​ ನೀಡಿದ ತೀರ್ಪನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಆದರೆ, ತೀರ್ಪು ಖಂಡಿಸಿ ಕರ್ನಾಟಕ ಬಂದ್​ಗೆ ಕರೆ ನೀಡಲಾಯಿತು. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪರಿಣಾಮ ಬೇರೆ ಬೇರೆ ಬೆಳವಣಿಗೆಗೆ ಕಾರಣವಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತೆ. ಇನ್ನಾದರೂ ಎಲ್ಲ ಧರ್ಮದವರೂ ಶಾಂತಿ ಕಾಪಾಡುವತ್ತ ಹೋಗಬೇಕಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, ಹಿಜಾಬ್​ ನಂತರ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಸಮಾಜದಲ್ಲಿ ಶಾಂತಿ ನೆಲೆಸಬೇಕು ಎಂಬುದು ಎಲ್ಲರ ಅಪೇಕ್ಷೆ. ಆದರೆ, ನ್ಯಾಯಾಲಯದ ಆದೇಶದ ಬಳಿಕ ನಡೆದ ಚಟುವಟಿಕೆ ಯಾರೂ ಒಪ್ಪುವಂಥದ್ದಲ್ಲ. ಈ ಬೆಳವಣಿಗೆ ಯಾರಿಗೂ ಶೋಭೆ ತರುವಂತಹದ್ದಲ್ಲ. ಈ ವಿಚಾರವನ್ನು ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ ಕಟೀಲ್​, ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದಕ್ಕೆ ಯಾವ ರೀತಿ ಸ್ಪಂದಿಸಬೇಕು ಎಂಬುದನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net