ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ

uday garudachar
Published on

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 10 ಸಾವಿರ ರೂ. ದಂಡ ಹಾಗೂ 2 ತಿಂಗಳು ಜೈಲು ಶಿಕ್ಷೆ ‌ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ತೀರ್ಪು ಪ್ರಕಟಿಸಿದೆ.

2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ವಿರುದ್ಧ ಸೋದರ ಸಂಬಂಧಿ ಎಚ್.ಜಿ.ಪ್ರಶಾಂತ್ ಎಂಬುವರು 2019ರ ಅಕ್ಟೋಬರ್​ನಲ್ಲಿ ಜೆಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆ ಸೆ.125 ಎ ಅಡಿ ಆರೋಪ ಸಾಬೀತಾಗಿದ್ದು, ಶಾಸಕರಿಗೆ ಶಿಕ್ಷೆ ವಿಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net