

ಬೆಂಗಳೂರು: ಬಸವರಾಜ ಬೊಮ್ಮಾಯಿ ರಚಿಸಿದ ಸಂಪುಟ ಎಲ್ಲ ವರ್ಗದವರಿಗೂ ನ್ಯಾಯ ಕೊಟ್ಟಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಬಿಜೆಪಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಯಡಿಯೂರಪ್ಪ, ಸಂಪುಟದಲ್ಲಿ ಸಾಮಾಜಿಕ ನ್ಯಾಯ ಇದೆ. ಸರ್ವರಿಗೂ ಸಮಬಾಳು, ಸಮಪಾಲು ಇದೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಒಳ್ಳೆಯ ದಿನ ಬರುತ್ತದೆ ಎಂದರು.
ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆ ಆಗಿರುವುದು ಆ ಭಾಗದಲ್ಲಿ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುವೆ. ಆಗ ಇನ್ನಷ್ಟು ಜನರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಉತ್ತಮ ಸಚಿವ ಸಂಪುಟ ರಚಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅಭಿನಂದನೆ ತಿಳಿಸುವೆ ಎಂದರು.