ಕಾನೂನು ಅರಿವಿನಿಂದ ಭವಿಷ್ಯ ಉಜ್ವಲ

sunil hosmani
ಕೋಲಾರ ತಾಲೂಕಿನ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್​ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಎಸ್​. ಹೊಸಮನಿ ಮಾತನಾಡಿದರು. ಸುಬ್ಬನಾಯಕ್​, ಸಿ.ಯಲ್ಲೇಶ್​ ಇದ್ದರು.
Published on

ಕೋಲಾರ: ವಿದ್ಯಾಭ್ಯಾಸದ ಜತೆಗೆ ಸಂವಿಧಾನ ಮತ್ತು ಭಾರತೀಯ ಕಾನೂನುಗಳ ಅರಿವು ಪಡೆದುಕೊಳ್ಳಬೇಕು. ಆಗ ಉನ್ನತ ಶಿಕ್ಷಣ ಪಡೆದುಕೊಂಡು ಭವಿಷ್ಯ ಉಜ್ವಲವಾಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ಸುನೀಲ ಎಸ್​.ಹೊಸಮನಿ ಹೇಳಿದರು. ತಾಲೂಕಿನ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್​ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಆರ್ಸೆಟಿ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಮಾಜಿಕ ಪಿಡುಗಳ ನಿಮೂರ್ಲನೆಗೆ ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಅವುಗಳ ಅರಿವು ಪಡೆದುಕೊಳ್ಳುವ ಮೂಲಕ ಜಾಗೃತರಾಗಬೇಕು. ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ ನಿಷೇಧ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಕಲಿಯವುದರಿಂದ ನಮ್ಮ ವ್ಯಕ್ತಿತ್ವದ ಬೆಳವಣಿಗೆ ಆಗಲು ಸಾಧ್ಯ ಎಂದು ತಿಳಿಸಿದರು.

ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸುವುದು. ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮ ಎಂದು ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು, ವಿವಾಹವಾಗುವುದು ಅಪರಾಧ. ಪ್ರತಿಯೊಬ್ಬರಿಗೂ ಜೀವನದ ಬಗ್ಗೆ ಜಾಗೃತಿ ಇರಬೇಕು. ಪೋಕ್ಸೋ ಕಾಯ್ದೆ ಬಗ್ಗೆ ಎಲ್ಲರಿಗೂ ಎಚ್ಚರಿಕೆ ಇರಬೇಕು ಎಂದರು.

ಜಿಲ್ಲಾ ಲೀಡ್​ ಬ್ಯಾಂಕ್​ ವ್ಯವಸ್ಥಾಪಕ ಸುಬ್ಬನಾಯಕ್​ ಮಾತನಾಡಿ, ಜೀವನದಲ್ಲಿ ಯಾವುದೇ ಸಮಸ್ಯೆ ಇಲ್ಲದೇ, ಸಂತೋಷದಿಂದ ಕಳೆಯಬೇಕಾದರೆ ಕಾನೂನುಗಳ ಬಗ್ಗೆ ಅರಿವು ಹೊಂದಿ, ಅವುಗಳನ್ನು ಪಾಲಿಸಿದರೆ ಸಾಧ್ಯ ಎಂದರು.

ಆರ್ಸೆಟಿ ತರಬೇತಿ ಸಂಸ್ಥೆಯ ನಿರ್ದೇಶಕ ಸಿ.ಯಲ್ಲೇಶ್​ ಮಾತನಾಡಿ, ಕಾನೂನು ಸೇವೆಗಳ ಪ್ರಾಧಿಕಾರವು ಸಾರ್ವಜನಿಕರಿಗೆ ಮಾರ್ಗದರ್ಶನ ಮತ್ತು ಸಹಕಾರ ನೀಡುತ್ತಿದ್ದು, ಎಲ್ಲರೂ ಸದುಪಯೋಗ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ತರಬೇತುದಾರರಾದ ಕೆ.ವಿ. ವಿಜಯ್​ಕುಮಾರ್​, ದೇವಲಪಲ್ಲಿ ಎನ್​.ಗಿರೀಶ್​ರೆಡ್ಡಿ, ಕೆ.ಲೋಕೇಶ್​, ಎನ್​.ವಿ. ನಾರಾಯಣಸ್ವಾಮಿ, ಯು.ಆರ್​.ಅರ್ಪಿತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net