ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

1226424
Published on

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಗರದಲ್ಲಿ ಸಂಭವಿಸಿದೆ.

ಬಿಎಸ್​ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ(30) ಮೃತರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರನ್ನು ಡಾ.ನೀರಜ್​ ಜತೆ ಮದುವೆ ಮಾಡಿಕೊಡಲಾಗಿತ್ತು.

ಕ್ರೆಸೆಂಟ್ ರಸ್ತೆಯ ಅಪಾರ್ಟ್‌ಮೆಂಟ್​ನಲ್ಲಿ ನೆಲೆಸಿದ್ದರು. ದಂಪತಿಗೆ ಒಂದು ಮಗು ಇದೆ. ಶುಕ್ರವಾರ ಬೆಳಗ್ಗೆ ಪತಿ ನೀರಜ್​ ಕೆಲಸಕ್ಕೆ ಹೋಗಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆ ಕೆಲಸದವರು ಮನೆ ಬಳಿಗೆ ಬಂದು ಬಾಗಿಲು ಬಡಿದರೂ ತೆರೆದಿರಲಿಲ್ಲ. ಆಗ ನೀರಜ್​ಗೆ ಫೋನ್​ ಮಾಡಿ ತಿಳಿಸಿದ್ದರು. ಆ ವೇಳೆ ಸೌಂದರ್ಯ ಮೃತಪಟ್ಟಿರುವುದು ಗೊತ್ತಾಗಿದೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net