ಪ್ಲೀಸ್​ ಸರ್, ನೀವು ನಮ್ಮ ಕೈಬಿಡ್ಬೇಡಿ... ಎಂದು ಯಡಿಯೂರಪ್ಪಗೆ ದುಂಬಾಲು ಬಿದ್ದ ಶಾಸಕರು-ಮಾಜಿ ಸಚಿವರು

BSY
Published on

ಬೆಂಗಳೂರು: ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11ಕ್ಕೆ ಪ್ರಮಾಣವಚನ ಸ್ವೀಕರಿಸುವ ಸಿದ್ಧತೆಯಲ್ಲಿದ್ದಾರೆ. ಅತ್ತ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಆಕಾಂಕ್ಷಿತರು ಹಂಗಾಮಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಬಳಿ ಗಿರಕಿ ಹೊಡೆಯುತ್ತಲೇ ಇದ್ದಾರೆ.

ಕಾವೇರಿ ನಿವಾಸ ರಾಜಕೀಯ ಕೇಂದ್ರಬಿಂದುವಾಗಿದ್ದು, ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ಇಂದು ಬೆಳಗ್ಗೆಯಿಂದೇ ಮಾಜಿ ಸಚಿವರು, ಶಾಸಕರು ಆಗಮಿಸುತ್ತಿದ್ದಾರೆ. ಯಡಿಯೂರಪ್ಪ ಅವರೇ ಸುಪ್ರೀಂ ಎಂದು ಭಾವಿಸಿರೋ ಶಾಸಕರು ಮತ್ತು ಮಾಜಿ ಸಚಿವರು ಸಚಿವ ಸಂಪುಟ ಸೇರಲು ಭಾರೀ‌ ಲಾಭಿ ನಡೆಸುತ್ತಿದ್ದಾರೆ. ಒಬ್ಬೊಬ್ಬರಾಗಿ ಕಾವೇರಿಗೆ ಆಗಮಿಸುತ್ತಿದ್ದು, ಮನದ ಬೇಡಿಕೆಯನ್ನು ಈಡೇರಿಸುವಂತೆ ಬಿಎಸ್​ವೈ ಅವರಿಗೆ ಮನವಿ ಮಾಡುತ್ತಿದ್ದಾರೆ.

ಕುಮಟಾ ಶಾಸಕ ದಿನಕರ್ ಶೆಟ್ಟಿ, ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ವಿರೂಪಾಕ್ಷಪ್ಪ ಬಳ್ಳಾರಿ, ತಿಪ್ಪಾರೆಡ್ಡಿ ಮಾತ್ರವಲ್ಲ, ಆರ್.ಅಶೋಕ್, ಬೈರತ್ತಿ ಬಸವರಾಜ್, ಪ್ರಭು ಚೌಹಾಣ್, ಗೋವಿಂದ ಕಾರಜೋಳ, ಡಾ.ಕೆ. ಸುಧಾಕರ್, ಭೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್ ಮತ್ತಿತರರು ಬಿಎಸ್​ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net