ಕಂದಕಕ್ಕೆ ಉರುಳಿದ ಬಸ್​: 27ಕ್ಕೂ ಹೆಚ್ಚು ಮಂದಿ ಸಾವು

Accident Bike
Published on

ಲಿಮಾ(ಪೆರು): ಕಂದಕಕ್ಕೆ ಬಸ್​ ಉರುಳಿ 27ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟು, 13 ಮಂದಿ ಗಾಯಗೊಂಡ ಘಟನೆ ದಕ್ಷಿಣ ಪೆರುವಿಯನ್ ಪ್ರದೇಶದ ಅಯಾಕುಚೊದಲ್ಲಿ ಶುಕ್ರವಾರ ಸಂಭವಿಸಿದೆ.

ಮೃತರೆಲ್ಲರೂ ವಾರಿ ಪಲೋಮಿನೋ ಕಂಪನಿಯ ಗಣಿ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಕುಟುಂಬ ಸದಸ್ಯರು ಎಂದು ತಿಳಿದುಬಂದಿದೆ. ಇವರೆಲ್ಲರೂ ಅಯಾಕುಚೊ ಪ್ರದೇಶದಿಂದ ಅರೆಕ್ವಿಪಾಗೆ ಬಸ್​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಸುಮಾರು 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ್ದು, ಅಪಾರ ಪ್ರಮಾಣದ ಸಾವು-ನೋವು ಉಂಟು ಮಾಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ತಂಡ, ಅಗ್ನಿಶಾಮಕ ದಳ ಮತ್ತು ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net