ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೊರಟ್ಟಿದ್ದವರ ಕಾರು ಭೀಕರ ಅಪಘಾತ! ಸ್ಥಳದಲ್ಲೇ ಇಬ್ಬರ ಸಾವು, ಐವರ ಸ್ಥಿತಿ ಗಂಭೀರ

accident
Published on

ಉತ್ತರಕನ್ನಡ: ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.

ಕಾರವಾರ ತಾಲೂಕಿನ ಬೈರೆ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಸೈಯದ್( 35) ಮತ್ತು ತಾಯವ್ವ ಮೃತಪಟ್ಟಿದ್ದಾರೆ. ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಕಾರವಾರ ತಾಲೂಕಿನ ಹಳಗಾದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಾರಿನಲ್ಲಿ ಆಗಮಿಸುತ್ತಿದ್ದರು. ಬೈರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಐವರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net