ಕಾಸ್ಟಿಂಗ್​ ಕೌಚ್​ ಬಗ್ಗೆ ನಟಿ ರಾಗಿಣಿ ಸ್ಫೋಟಕ ಹೇಳಿಕೆ!

Ragini-Dwiwedi
Published on

ವಿಜಯಪುರ: ಎಲ್ಲ ಸಿನಿಮಾ ಇಂಡಸ್ಟ್ರಿಯಲ್ಲೂ ಕಾಸ್ಟಿಂಗ್​ ಕೌಚ್​(ಪಾತ್ರಕ್ಕಾಗಿ ಪಲ್ಲಂಗ) ಎಂಬ ವಿಚಾರ ಆಗಾಗ್ಗೆ ಸದ್ದು ಮಾಡುತ್ತಲೇ ಇದೆ. ಇದೀಗ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಕುರಿತು ಸ್ಯಾಂಡಲ್​ವುಡ್​ನ ಮಾದಕ ನಟಿ ರಾಗಿಣಿ ದ್ವಿವೇದಿ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಗಿಣಿ ದ್ವಿವೇದಿ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಸ್ಟುಪಿಡ್ ವರ್ಡ್. ನೀವು ನಡೆಸುವ ಜೀವನದ ಜರ್ನಿ ಮೇಲೆ ಅದು ಡಿಫೆಂಡ್ ಆಗಿರುತ್ತೆ. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗೋದಿಲ್ಲ. ಲೈಫ್​ನಲ್ಲಿ ಎರಡು ಥರ ಜೀವನ ಇದೆ. ಒಂದು ಶಾರ್ಟ್ ಕಟ್, ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೆಯುತ್ತೀವಿ. ಪ್ರತಿಯೊಂದೂ ಸ್ಟೆಪ್ ಬೈ ಸ್ಟೆಪ್ ಆಗುತ್ತೆ. ಶಾರ್ಟ್​ ಕಟ್ ತಗೊಂಡ್ರೆ ಕೆಲವೊಮ್ಮೆ ರಾಂಗ್ ಪರ್ಸನ್ ಅನ್ನು ಮೀಟ್ ಮಾಡಬೇಕಾಗುತ್ತೆ ಎಂದರು.

ಅತೀ ಶೀಘ್ರದಲ್ಲಿ ನೇಮು, ಫೇಮು, ದುಡ್ಡು ಗಳಿಸೋದನ್ನ ಬಿಟ್ಟು, ನಮ್ಮ ಕೆಲಸದ ಮೇಲೆ ನಾವು ಏನು ಮಾಡ್ತೀವಿ ಅನ್ನೋದರ ಮೇಲೆ ಫೋಕಸ್ ಮಾಡ್ಬೇಕು. ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್​ಪೀರಿಯನ್ಸ್ ಆಗಿಲ್ಲ. ಹನ್ನೆರಡು ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿದ್ದೇನೆ, ಅಲ್ಲಿ ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಟಿ ರಾಗಿಣಿ, ಯಾರಾದ್ರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net