ಸಂಭ್ರಮದ ಗುಜ್ಜಮ್ಮ ಜಾತ್ರಾ ಮಹೋತ್ಸವ

ಸಂಭ್ರಮದ ಗುಜ್ಜಮ್ಮ ಜಾತ್ರಾ ಮಹೋತ್ಸವ
Published on

ಸರಗೂರು: ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಸೋಮವಾರ ನೂತನ ಮಾರಮ್ಮ ದೇವಸ್ಥಾನ ಉದ್ಘಾಟನೆ ಹಾಗೂ ಗುಜ್ಜಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಹೋಮ, ಹವನ, ಪೂಜಾ ಕೈಂಕರ್ಯಗಳು ಜರುಗಿದವು. ಪೂಜೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಳಿರು- ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯ ನಿರ್ಮಾಣಕ್ಕೆ ಹಣ ಸಹಾಯ ಮಾಡಿದವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಕೊತ್ತೇಗಾಲ ಗ್ರಾಮದಿಂದ ಚಿಕ್ಕದೇವಮ್ಮ ಬೆಟ್ಟಕ್ಕೆ ಹೋಗುವ ರಸ್ತೆ ಕಾಮಗಾರಿ ಶೀಘ್ರದಲ್ಲಿ ನೆರವೇರಿಸಲಾಗುತ್ತದೆ. ಗ್ರಾಮದಲ್ಲಿ ಬಯಲು ರಂಗಮಂದಿರ, ಹ್ಯಾಂಡ್ ಪೋಸ್ಟ್‌ನಿಂದ ಸರಗೂರು ವರೆಗೆ ಜೋಡಿ ರಸ್ತೆ ಕಾಮಗಾರಿ ಹಾಗೂ ಗಾಣಿಗ ಸಮಾಜ ಅಭಿವೃದ್ಧಿಗೆ 5 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಜಿ.ಪಂ. ಮಾಜಿ ಸದಸ್ಯ ಪಿ.ರವಿ, ಸುಭಾನ್, ಕೊತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವಪ್ಪ, ಮಹದೇವ್, ರತ್ನಯ್ಯ, ನಂಜಪ್ಪ, ಮಂಜುನಾಥ್, ರಿತಿಶ್, ಆದಿರಾಜಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net