ಆ ಹೋಟೆಲ್​ನಲ್ಲಿ ಎಚ್​ಡಿಕೆ ರಾಸಲೀಲೆ ಆಡಿಕೊಂಡಿದ್ರು... ವಿವಾದದ ಕಿಡಿ ಹೊತ್ತಿಸಿದ ಯೋಗೇಶ್ವರ್​

HDK-CPY
Published on

ರಾಮನಗರ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​, ಇದೀಗ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡಿದ್ದರು. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ... ಎಂದು ಯೋಗೇಶ್ವರ್​ ಹೇಳಿದ್ದಾರೆ.

ಸೋಮವಾರ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್​, ನನ್ನಿಂದ ಯಾಕಪ್ಪ ಎಚ್​ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ ನನ್ನ ಮುಂದೆ ಕೂರಿಸಿ. ವೈಯಕ್ತಿಕ ಹಾಗೂ ಸಾರ್ವಜನಿಕ ವಿಚಾರಗಳನ್ನು ಬಹಿರಂಗವಾಗಿ ಮಾತಾಡೋಣ. 14 ತಿಂಗಳು‌ ಸಿಎಂ ಆಗಿದ್ದ ವೇಳೆ ಚನ್ನಪಟ್ಟಣಕ್ಕೆ ಎಚ್​ಡಿಕೆ ಬರ್ತಿರಲಿಲ್ಲ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ರಾಸಲೀಲೆ ಆಡಿಕೊಂಡಿದ್ರು. ಇದೀಗ ಚನ್ನಪಟ್ಟಣ ತಾಲೂಕಿಗೆ ಬಂದು ಜನರ ಮುಂದೆ ಕಣ್ಣೀರಿಟ್ಟು ನಾಟಕ ಮಾಡ್ತಿದ್ದಾರೆ. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನು ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ. ಎಚ್​ಡಿಕೆ ಬಹಿರಂಗ ಚರ್ಚೆಗೆ ಬರಲಿ, ನಾನೂ ಸಿದ್ಧನಿದ್ದೇನೆ. ನನ್ನ ಬಗ್ಗೆ ಏಕವಚನದಲ್ಲಿ ಮಾತಾಡಿದ್ರೆ, ನಾನೂ ಕೂಡ ಏಕವಚನದಲ್ಲೇ ಮಾತಾಡ್ತೀನಿ ಎಂದು ಕಿಡಿಕಾರಿದರು.(ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net