

ಚನ್ನಪಟ್ಟಣ: ಶ್ರೀ ಪಟ್ಟಲದಮ್ಮ ದೇವಿಯ ಕೊಂಡೋತ್ಸವದಲ್ಲಿ ಕೊಂಡ ಹಾಯುತ್ತಿದ್ದ ಅರ್ಚಕ ಆಯತಪ್ಪಿ ಕೊಂಡಕ್ಕೆ ಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ರಾಜು ಕೊಂಡಕ್ಕೆ ಬಿದ್ದು ಗಾಯಗೊಂಡಿರುವ ಅರ್ಚಕ. ಕೊಂಡಹಾಯುವ ವೇಳೆ ಆಯತಪ್ಪಿ ಕೊಂಡಕ್ಕೆ ಬಿದ್ದ ಅರ್ಚಕರು ಬಳಿಕ ಮೇಲೆದ್ದು ಓಡಿದರು. ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರ್ಷಗಳ ಹಿಂದೆ ಭಕ್ತನೊಬ್ಬನ್ನು ಕೊಂಡ ಹಾಯುವಾಗ ಬಿದ್ದು ಗಾಯಗೊಂಡಿದನ್ನು ಸ್ಮರಿಸಬಹುದು.