

China Restaurant: ಚೀನಾದ ಲಿಯಾಯಾಂಗ್ ನಗರದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ (ಏ.29) ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಎರಡು ಮತ್ತು ಮೂರು ಅಂತಸ್ತಿನ ಕಟ್ಟಡಗಳಲ್ಲಿ ಬೆಂಕಿ ಧಗಧಗನೆ ಉರಿಯುತ್ತಿರುವ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ.
ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಅಗ್ನಿ ನಂದಿಸುವಲ್ಲಿ ಭಾರೀ ಶ್ರಮಿಸುತ್ತಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಈ ತಿಂಗಳು ಚೀನಾದಲ್ಲಿ ನಡೆದ ಎರಡನೇ ಅಗ್ನಿ ಅವಘಡ ಇದಾಗಿದೆ. ಏಪ್ರಿಲ್ 9ರಂದು, ನರ್ಸಿಂಗ್ ಹೋಂನಲ್ಲಿ ಸಂಭವಿಸಿದ ಬೆಂಕಿಯಲ್ಲಿ 20 ಮಂದಿ ದುರ್ಮರಣ ಹೊಂದಿದ್ದರು. ಚೆಂಗ್ಡು ನಗರದ ಲಾಂಗ್ಹುವಾ ಕೌಂಟಿಯಲ್ಲಿ ರಾತ್ರಿ 9ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡ 20 ಮಂದಿಯೂ ವೃದ್ಧರೇ ಆಗಿದ್ದರು ಎಂದು ವರದಿಯಾಗಿದೆ,(ಏಜೆನ್ಸೀಸ್).