ಹೊಳಲ್ಕೆರೆಯ ಹಾಸ್ಟೆಲ್​ನಲ್ಲಿ ಊಟ ಸೇವಿಸಿದ 10 ವಿದ್ಯಾರ್ಥಿನಿಯರು ಅಸ್ವಸ್ಥ

New Project(2)
Published on

ಚಿತ್ರದುರ್ಗ: ಹೊಳಲ್ಕೆರೆ ಪಟಣ್ಣದ ಬಾಲಕಿಯರ ಬಿಸಿಎಂ ಹಾಸ್ಟೆಲ್​ನಲ್ಲಿ ಊಟ ಸೇವಿಸಿದ 10ಕ್ಕೂ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ರಾತ್ರಿ ಪಾಯಸ, ಅನ್ನ ಸಾಂಬರ್ ಸೇವಿಸಿದ್ದ ಒಂದು ತಾಸಿನ ನಂತರ 8, 9, 10ನೇ ತರಗತಿಯ 10 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. 45 ವಿದ್ಯಾರ್ಥಿನಿಯರಲ್ಲಿ 10 ಮಂದಿ ಊಟ ಮಾಡಿದ್ದರು. ಇವರೆಲ್ಲರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಇವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲ ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಎರಡು ದಿನಗಳ ಹಿಂದಷ್ಟೇ ಭರಮಸಾಗರದ ಬಿಸಿಯೂಟ ಸೇವನೆ ಮಾಡಿ 80ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥತರಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net