ರಾತ್ರಿ ವಿಷಾಹಾರ ಸೇವಿಸಿ ಒಂದೇ ಕುಟುಂಬ ಮೂವರ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

death
Published on

ಚಿತ್ರದುರ್ಗ: ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಚಿತ್ರದುರ್ಗ ತಾಲೂಕು ಇಸಾಮುದ್ರ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ತಿಪ್ಪಾನಾಯ್ಕ್(46), ಇವರ ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ(75) ಮೃತರು. ರಾಹುಲ್ (18) ಮತ್ತು ರಮ್ಯ(16) ಅಸ್ವಸ್ಥಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಇವರೆಲ್ಲರೂ ಭಾನುವಾರ ರಾತ್ರಿ ಮನೆಯಲ್ಲಿ ರಾಗಿ ಮುದ್ದೆ, ಕಾಳಿನ ಸಾರು ಸೇವಿಸಿದ್ದರು, ಬಳಿಕ ಅಸ್ವಸ್ಥಗೊಂಡಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಮೂವರು ಬದುಕಲಿಲ್ಲ. ಮಕ್ಕಳಿಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net